ವೆಂಕಟೇಶ ಬೇಡಿಕೊಂಬೆ ಕೃಪೆಯ ಪಾಲಿಸೋ
ಬ್ರಹ್ಮಶಂಕರಾದಿ ವಂದ್ಯ ಎನಗೆ ಮುಕ್ತಿ ತೋರಿಸೊ ||ಪ||
ನಷ್ಟ ಮೊದಲಾದಂಥ ಕಷ್ಟ ಬಿಡಿಸೊ
ನಿನ್ನ ಪಟ್ಟದ ರಾಣಿಗೆ ಹೇಳಿ ಪದವಿ ಕೊಡಿಸೊ
ಇಷ್ಟ ಭಕ್ತಜನರೊಳು ಎನ್ನ ಸೇರಿಸೊ
ಈ ಸೃಷ್ಟಿಯೊಳು ನಿನ್ನ ದಾಸಾನು ದಾಸನೆನಿಸೊ ||೧||
ಉಟ್ಟು ಉಂಡು ಮಿಕ್ಕಿದ್ದೆಲ್ಲ ಎನಗೆ ಹಾಕಿಸೊ
ಪೊಂಬಟ್ಟಲೊಳಗಿನ ಹಾಲು ಉಚ್ಚಿಷ್ಟ ಹಾಕಿಸೊ
ಗಟ್ಯಾಗಿ ಸಕ್ಕರೆ ತುಪ್ಪ ರೊಟ್ಟಿ ಉಣ್ಣಿಸೊ
ಮುಂದೆ ಹುಟ್ಟಿ ಇಹ ಜನ್ಮಂಗಳ ಎನಗೆ ಬಿಡಿಸೊ ||೨||
ಕಿಟ್ಟಗಟ್ಟಿದ ಕಬ್ಬಿಣಕ್ಕೆ ಪುಟವ ಹಾಕಿಸೊ
ಉತ್ಕೃಷ್ಟ ಬಂಗಾರದೊಳು ಎನ್ನ ಸೇರಿಸೊ
ಬೆಟ್ಟಿಗೆ ಉಂಗುರ ಮಾಡಿ ಎನ್ನ ಧರಿಸೊ ಸ್ವಾಮಿ
ದಿಟ್ಟ ಪುರಂದರ ವಿಠಲನೆ ದಯದಿ ಪಾಲಿಸೊ ||೩||
Venkatesa bedikombe krupeya paliso brahma
Sankaradi vandya enage mukti toriso ||pa||
Nashta modaladantha kashta bidiso
Ninna pattada ranige heli padavi kodiso
Ishta baktajanarolu enna seriso
I srushtiyolu ninna dasanu dasaneniso ||1||
Uttu undu mikkiddella enage hakiso
Pombattalolagina halu uccishta hakiso
Gatyagi sakkare tuppa rotti unniso
Munde hutti iha janmangala enage bidiso ||2||
Kittagattida kabbinakke putava hakiso
Utkrushta bangaradolu enna seriso
Bettige ungura madi enna dhariso svami
Ditta purandara vithalane dayadi paliso ||3||
i want lyrics of sharanu venkataramana charanava nambidey nanu
LikeLike