ವೃಂದಾವನದಲಿ ರಾಜಿಪ ಯತಿವರನ್ಯಾರೇ ಪೇಳಮ್ಮಯ್ಯ || ಪ ||
ಇಂದಿರೆಯನರಸನ ಚಂದದಿ ಭಜಿಸುವ
ಕುಂದುರಹಿತ ರಾಘವೇಂದ್ರ ಕಾಣಮ್ಮ || ಅ ||
ಮಂತ್ರಾಲಯಕೃತಮಂದಿರನೆನಿಸುವನ್ಯಾರೇ ಪೇಳಮ್ಮಯ್ಯ
ತಂತ್ರದೀಪಿಕಾ ಗ್ರಂಥಕರ್ತನ್ಯಾರೇ ಪೇಳಮ್ಮಯ್ಯ
ಕಂತುಪಿತನ ಸತ್ಪಂಥದಿ ಭಜಿಸುವನ್ಯಾರೇ ಪೇಳಮ್ಮಯ್ಯ
ಚಿಂತಿತಫಲದ ದುರಂತಶಕ್ತ ಜಯವಂತ ನೀತ ಅಘಶಾಂತ ಕಾಣಮ್ಮ || ೧ ||
ಶ್ರೀಸುಧೀಂದ್ರಕರಕಮಲಜನೆನಿಸುವನ್ಯಾರೇ ಪೇಳಮ್ಮಯ್ಯ
ತಾ ಸ್ವಪ್ನದಿ ಮಂತ್ರಾಕ್ಷತೆ ಕೊಡುತಿಹನ್ಯಾರೇ ಪೇಳಮ್ಮಯ್ಯ
ಆಶುಗಮನಮತ ಸ್ಥಾಪಕನೆನಿಸುವನ್ಯಾರೇ ಪೇಳಮ್ಮಯ್ಯ
ಭಾಸುರಜ್ಞಾನ ವಿಶೇಷವಾಗಿ ಹರಿದಾಸ್ಯವ ಪಡೆದ ಯತೀಶ ಕಾಣಮ್ಮ || ೨ ||
ಧಾರುಣಿಪತಿಸುತೆ ತೀರದಿ ನೆಲೆಸಿಹನ್ಯಾರೇ ಪೇಳಮ್ಮಯ್ಯ
ಸಾರಿದ ಭಜಕರ ಬಾರಿಗೆ ಪೊರೆಯುವನ್ಯಾರೇ ಪೇಳಮ್ಮಯ್ಯ
ಕಾರುಣ್ಯನಿಧಿ ಅಪಾರ ಮಹಿಮನಿವನ್ಯಾರೇ ಪೇಳಮ್ಮಯ್ಯ
ನಾರಾಯಣ ತಂದೆಶ್ರೀಪತಿವಿಠ್ಠಲನ ಆರಾಧಿಪ ರಾಘವೇಂದ್ರ ಕಾಣಮ್ಮ || ೩ ||
Vrundavanadali rajipa yativaranyare pelammayya || pa ||
Indireyanarasana chandadi Bajisuva
Kundurahita raghavendra kanamma || a ||
Mantralaya krutamandiranenisuvanyare pelammayya
Tantradipika gramthakartanyare pelammayya
Kantupitana satpamthadi bajisuvanyare pelammayya
Chintitapalada durantasakta jayavanta nita agasanta kanamma || 1 ||
Srisudhindra karakamala janenisuvanyare pelammayya
Ta svapnadi mantrakshate kodutihanyare pelammayya
Asugamanamata sthapakanenisuvanyare pelammayya
Basuraj~jana viseshavagi haridasyava padeda yatisa kanamma || 2 ||
Dharunipatisute tiradi nelesihanyare pelammayya
Sarida Bajakara barige poreyuvanyare pelammayya
Karunyanidhi apara mahimanivanyare pelammayya
Narayana tande sripativiththalana aradhipa raghavendra kanamma || 3 ||
One thought on “Vrundavanadali rajipa”